ತಲಪಾಡಿ : ಕಾಲೇಜು ವಿದ್ಯಾರ್ಥಿಗಳ ಮೇಲೆ ಬಸ್ಸಿಗೆ ನುಗ್ಗಿ ಮಾರಣಾಂತಿಕ ಹಲ್ಲೆ – 15 ಮಂದಿ ತಂಡದಿಂದ ಕೃತ್ಯ.
ಕೇರಳ ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿಯಲ್ಲಿ 5 ಮಂದಿ ವಿದ್ಯಾರ್ಥಿಗಳ ಮೇಲೆ 15 ಮಂದಿಯ ತಂಡವೊಂದು ಬಸ್ಸಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಕುಂಜತ್ತೂರು ನಿವಾಸಿ ಇಕ್ಬಾಲ್ ಅಹ್ಮದ್ ಎಂಬವರ ಪುತ್ರ ಇಮ್ರಾನ್(16) , ಪಳ್ಳಿಕ್ಕುಞÂ್ಞ ಎಂಬವರ ಪುತ್ರ ಫೈಝಲ್(16) ಎಂದು ಗುರುತಿಸಲಾಗಿದೆ. ಉಳಿದ ಮೂವರು ಪರೀಕ್ಷೆ ಇದ್ದ ಕಾರಣ ಪ್ರಾಥಮಿಕ ಚಿಕಿತ್ಸೆ ಪಡೆದು ಕಾಲೇಜಿಗೆ ತೆರಳಿದ್ದಾರೆಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ 5 ಮಂದಿ ವಿದ್ಯಾರ್ಥಿಗಳು ಕಾಲೇಜಿಗೆಂದು ತೆರಳಲು ತಲಪಾಡಿಯಿಂದ ಮಂಗಳೂರು ತೆರಳುವ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸಲಿಕ್ಕಾಗಿ ಕುಳಿತಿದ್ದರು.
ಈ ವೇಳೆ ಕಬ್ಬಿಣದ ರಾಡ್‍ನೊಂದಿಗೆ ತಲುಪಿದ 15 ಮಂದಿಯಷ್ಟು ತಂಡವೊಂದು ಇವರ ಮೇಲೆ ಏಕಾ ಏಕಿ ಹಲ್ಲೆ ನಡೆಸಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಮೂವರು ವಿದ್ಯಾರ್ಥಿಳು ಪ್ರಥಮ ಪಿ.ಯು. ಪರೀಕ್ಷೆ ಬರೆಯುವುದಕ್ಕಾಗಿ ಪ್ರಾಥಮಿಕ ಚಿಕಿತ್ಸೆ ಪಡೆದು ಕಾಲೇಜಿಗೆ ತೆರಳಿದ್ದಾರೆಂದು ತಿಳಿದು ಬಂದಿದೆ. ಹಲ್ಲೆ ನಡೆಸಿದವರು ಇಲ್ಲಿನ ಸಂಘಟನೆಯೊಂದರ ಕಾರ್ಯಕರ್ತರೆಂದು ಹೇಳಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Comments
Post a Comment