ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ನಿಧನ
ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ನಿಧನ
ಬಿಜ್ನೂರ್, ಫೆಬ್ರವರಿ 21: ಉತ್ತರ ಪ್ರದೇಶದ ಸಿತಾಪುರ ಎಂಬಲ್ಲಿ ಇಂದು(ಫೆ.21) ನಡೆದ ರಸ್ತೆ ಅಪಘಾತವೊಂದರಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಮೃತರಾಗಿದ್ದಾರೆ.
ಲೋಕೇಂದ್ರ ಸಿಂಗ್ ಮತ್ತವರ ಗನ್ ಮನ್, ಡ್ರೈವರ್ ಇದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದ ಬಿಜ್ನೋರ್ ನ ನೂರ್ಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಲೋಕೇಂದ್ರ ಸಿಂಗ್ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇವರು ತಮ್ಮ ಟೊಯೋಟಾ ಫಾರ್ಚೂನರ್ ವಾಹನದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
Comments
Post a Comment