ಮುಂದುವರೆದ ಆಪರೇಶನ್ ಹಸ್ತ ! ಮಗದೊಬ್ಬ ಬಿಜೆಪಿ ಶಾಸಕ ಕಾಂಗ್ರೆಸ್ ತೆಕ್ಕೆಗೆ !

ಮರಳಿ ಮನೆಗೆ’ -ಮತ್ತೊಬ್ಬ ಬಿಜೆಪಿ ಶಾಸಕ ಕಾಂಗ್ರೆಸ್ ಸೇರ್ಪಡೆ…!?

ಇದರ ಮುಂದುವರಿದ ಭಾಗವಾಗಿ ಚಿತ್ರದುರ್ಗ ವಿಧಾನಸಭಾ ಬಿಜೆಪಿಯಿಂದ ಗೆದ್ದಿರುವ ಹಾಲಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಕಾಂಗ್ರೆಸ್ ಕಡೆಗೆ ಮುಖ ಮಾಡಿ ನಿಂತಿರುವ ಶಾಸಕ ....

ಚಿತ್ರದುರ್ಗ : ಫೆ : 22, ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಗೆಲ್ಲುವ ಕುದುರೆಗಳಿಗಾಗಿ ಪಕ್ಷಗಳು ಹುಡುಕಾಟ ನಡೆಸುತ್ತಿದ್ದರೆ. ಮತ್ತೊಂದು ಕಡೆ ಗೆಲ್ಲುವ ಸ್ಥಾನಕ್ಕಾಗಿ ಅಭ್ಯರ್ಥಿಗಳು ಹುಡುಕಾಟ ನಡೆಸುತ್ತಿದ್ದಾರೆ.ಯಾವ ಚಿಹ್ನೆಯಡಿ ಮತ ಕೇಳಿದರೆ,ಮತ ಬೀಳಬಹುದು ಅನ್ನುವ ಲೆಕ್ಕಚಾರ ಅಭ್ಯರ್ಥಿಗಳದ್ದು. ಹೀಗಾಗಿ ಪಕ್ಷಾಂತರ ಪರ್ವ ಪ್ರಾರಂಭಗೊಂಡಿದೆ.

ಇದರ ಮುಂದುವರಿದ ಭಾಗವಾಗಿ ಚಿತ್ರದುರ್ಗ ವಿಧಾನಸಭಾ ಬಿಜೆಪಿಯಿಂದ ಗೆದ್ದಿರುವ ಹಾಲಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಕಾಂಗ್ರೆಸ್ ಕಡೆಗೆ ಮುಖ ಮಾಡಿ ನಿಂತಿದ್ದಾರೆ.
ತಿಪ್ಪಾರೆಡ್ಡಿ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜುಗೊಂಡಿದ್ದು, ಮುಂದಿನ ವಾರ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳುವ ವೇಳೆ ಕಮಲ ಪಾಳಯ ಬಿಟ್ಟು ಕೈ ಪಾಳಯ ಸೇರುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಇದಕ್ಕಾಗಿ ತೆರೆಮರೆಯ ಕಸರತ್ತು ನಡೆದಿದ್ದು, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ಕೂಡಾ ನಡೆಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಿಂದ ಗೆದ್ದು ಶಾಸಕರಾಗಿದ್ದ ತಿಪ್ಪಾರೆಡ್ಡಿ ಕಳೆದ ಬಾರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಮರಳಿ ಕಾಂಗ್ರೆಸ್ ನತ್ತ ತೆರಳಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದೆ ತಿಪ್ಪಾರೆಡ್ಡಿ ಡಿಕೆಶಿಯವರ ಜೊತೆಗೆ ಸುತ್ತುತ್ತಿದ್ದಾರಂತೆ.

ಸ್ಥಳೀಯ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರು ತಿಪ್ಪಾರೆಡ್ಡಿಯವರಿಗೆ ವಿರೋಧವಾಗಿರುವ ಹಿನ್ನಲೆಯಲ್ಲಿ ಕೈ ಪಾಳಯ ಕಡೆಗೆ ಅವರು ಹೆಜ್ಜೆ ಹಾಕುತ್ತಿದ್ದಾರೆ.

Comments

Popular posts from this blog

ಸಂಗಬೆಟ್ಟು: ನಾಲ್ಕೂವರೆ ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಚಲಾಕಿ ಕಳ್ಳರು..!

ನಾವು ಅಧಿಕಾರಕ್ಕೆ ಬಂದ್ರೆ ಕೇವಲ ಹಿಂದೂಗಳ ಮೇಲಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯುತ್ತೇವೆ : ಯಡಿಯೂರಪ್ಪ ಉವಾಚ !

ಕೈ ಹಿಡಿದ ಪತ್ನಿಯ ಕೈ, ಕಾಲು ಕತ್ತರಿಸಿ ಕೊಲೆಗೆ ಯತ್ನ- ಹೆರ್ಮುಂಡೆಯಲ್ಲೊಂದು ಪೈಶಾಚಿಕ ಕೃತ್ಯ