ಸಿದ್ದು ಸರಕಾರದ ಬೆನ್ನು ತಟ್ಟಿದ ರಾಜ್ಯಪಾಲ !

ಸಿದ್ದು ಸರಕಾರದ ಬೆನ್ನು ತಟ್ಟಿದ ರಾಜ್ಯಪಾಲ !

ಬ್ರೇಕಿಂಗ್ ನ್ಯೂಸ್, ಕರ್ನಾಟಕ ವರದಿ
ಬೆಂಗಳೂರು, ಫೆ.5: ವಿಧಾನ ಮಂಡಲದ ಜಂಟಿ ಅಧಿವೇಶವನ್ನು ಉದ್ದೇಶಿಸಿ ಸೋಮವಾರ ಮಾತನಾಡಿರುವ ರಾಜ್ಯಪಾಲ ವಜೂಭಾಯಿ ವಾಲಾ ನಾಲ್ಕು ವರ್ಷಗಳ ಕಾಲ ಸರಕಾರದ ಸಾಧನೆಯನ್ನು ಉಲ್ಲೇಖಿಸಿದ್ದು, ಸಮಾಜದ ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯಕ್ಕಾಗಿ ಸರಕಾರ ಪ್ರಯತ್ನ ಮಾಡಿದೆ. ಸರಕಾರವು ಹಸಿವು ಮುಕ್ತ ರಾಜ್ಯ ನಿರ್ಮಾಣ ಮಾಡಿದೆ ಎಂದು ಹೇಳಿದ್ದಾರೆ.

‘‘ನೀರಿನ ವಿಚಾರದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸಲಾಗಿದೆ. ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯಾಗಿ ಮಾಡಲಾಗಿದೆ. ಪೊಲೀಸ್ ಇಲಾಖೆಗೆ ಸಿಬ್ಬಂದಿ ನೇಮಕ ಮಾಡಲಾಗಿದೆ, ಅಭಿವೃದ್ಧಿಗಾಗಿ ಹಲವು ಯೋಜನೆಗಳ ಜಾರಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ವಿಚಾರದಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಾಗಿದೆ. ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಲಾಗಿದ್ದು 404 ಪ್ರಕರಣ ದಾಖಲಾಗಿದೆ. ರಾಜ್ಯ ಸರಕಾರ ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿದೆ’’ ಎಂದು ರಾಜ್ಯಪಾಲರು ಹೇಳಿದ್ದಾರೆ.

 ‘‘ಕೃಷಿ ಭಾಗ್ಯ ಯೋಜನೆ ಜಾರಿ ಮಾಡಲಾಗಿದೆ. ರೈತರಿಗೆ ಸಹಕಾರಿ ಸಂಘಗಳ ಮೂಲಕ ಸಾಲ ನೀಡಲಾಗುತ್ತಿದೆ. ಕೃಷಿ ಯಂತ್ರಗಳ ಖರೀದಿಗಾಗಿ 1,400 ಕೋ.ರೂ.ನೀಡಲಾಗಿದೆ. ಹೈದರಾಬಾದ್ ಕರ್ನಾಟಕ ಕಲ್ಯಾಣಕ್ಕೆ ಆದ್ಯತೆ ನೀಡಲಾಗಿದೆ. ಎಲ್ಲಾ ಕಾರಾಗೃಹಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋಮು ಹಿಂಸಾಚಾರ ಘಟನೆಗೆಯ ಬಗ್ಗೆ ದೃಢ ಕ್ರಮ ಕೈಗೊಳ್ಳಲಾಗಿದೆ’’ ಎಂದರು.

Comments

Popular posts from this blog

ಸಂಗಬೆಟ್ಟು: ನಾಲ್ಕೂವರೆ ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಚಲಾಕಿ ಕಳ್ಳರು..!

ನಾವು ಅಧಿಕಾರಕ್ಕೆ ಬಂದ್ರೆ ಕೇವಲ ಹಿಂದೂಗಳ ಮೇಲಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯುತ್ತೇವೆ : ಯಡಿಯೂರಪ್ಪ ಉವಾಚ !

ಕೈ ಹಿಡಿದ ಪತ್ನಿಯ ಕೈ, ಕಾಲು ಕತ್ತರಿಸಿ ಕೊಲೆಗೆ ಯತ್ನ- ಹೆರ್ಮುಂಡೆಯಲ್ಲೊಂದು ಪೈಶಾಚಿಕ ಕೃತ್ಯ