ಬಿಜೆಪಿಗರ ಕೈವಾಡದಿಂದ ಬಯಲಾಯಿತು ಸಿಎಂ ಸಿದ್ದರಾಮಯ್ಯ 'ಅವರ' ವೈರಲ್ ವೀಡಿಯೊದ ಹಿಂದಿನ ರಹಸ್ಯ !
ಬಯಲಾಯಿತು ಸಿಎಂ ಸಿದ್ದರಾಮಯ್ಯ 'ಅವರ' ವೈರಲ್ ವೀಡಿಯೊದ ಹಿಂದಿನ ರಹಸ್ಯ !
ಬ್ರೇಕಿಂಗ್ ನ್ಯೂಸ್ ಮಂಗಳೂರು ವರದಿ
ಬೆಂಗಳೂರು, :ಮಾ, 11, ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾದ ವೀಡಿಯೊ ಒಂದು ಫೇಸ್ ಬುಕ್, ವಾಟ್ಸ್‌ಆಯಪ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಿಜೆಪಿ ಬೆಂಬಲಿಗರು ಈ ವೀಡಿಯೊವನ್ನು ಪೋಸ್ಟ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನದ ಘನತೆ ಮರೆತು ವರ್ತಿಸುತ್ತಿದ್ದಾರೆ ಎಂದು ಟೀಕೆ ಮಾಡಿದ್ದರು.
ಇದೀಗ ಆ ವೈರಲ್ ವೀಡಿಯೊದ ಹಿಂದಿನ ಸತ್ಯ ಬಯಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೀಡಿಯೊ ಅಲ್ಲ. ಸಿರಿಧಾನ್ಯ ಕುರಿತಾದ ಕಾರ್ಯಾಗಾರವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೋಲುವ ರೈತರೊಬ್ಬರು ನೃತ್ಯ ಮಾಡಿದ್ದ ವೀಡಿಯೊ ಅದು.
ಅದನ್ನೇ ಬಳಸಿಕೊಂಡು ಬಿಜೆಪಿ ಬೆಂಬಲಿಗರು, ಸಂಘಪರಿವಾರದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಆ ವೈರಲ್ ವೀಡಿಯೊ ಮತ್ತು ಅಮಿನ್ ಮಟ್ಟು ಅವರ ಫೇಸ್ ಬುಕ್ ಪೋಸ್ಟ್ ಸ್ಕ್ರೀನ್ ಶಾಟ್ ಇಲ್ಲಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಅಮಿನ್ ಮಟ್ಟ ಅವರು ತಮ್ಮ ಫೇಸ್ ಬುಕ್ ನಲ್ಲಿ "ಬಿಜೆಪಿ ಭಕ್ತರಿಂದ ರೈತರಿಗೆ ಅವಮಾನ. ಈ ಬಿಜೆಪಿ ಭಕ್ತರು ಹೇಳುವ ಹಸಿ ಸುಳ್ಳಿಗೆ ಇದೊಂದು ಸ್ಪಷ್ಟ ಉದಾಹರಣೆ. ನಾನು ಭಾಗವಹಿಸಿದ್ದ ಸಿರಿಧಾನ್ಯ ಕುರಿತಾದ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೋಲುವ ರೈತರೊಬ್ಬರು ನೃತ್ಯ ಮಾಡಿದ್ದರು. ನಾನದನ್ನ ಲೈವ್ ಮಾಡಿದ್ದೆ. ಇದನ್ನು ಕದ್ದು ಶಿರಸಿ ಅನಂತನ ಭಕ್ತರು ತಮ್ಮ ಪೇಜ್ ನಲ್ಲಿ ಸಿದ್ಧ ರಾಮಯ್ಯನವರು ನೃತ್ಯ ಮಾಡಿದ್ದಾರೆ ಎಂದು ಅಪ ಪ್ರಚಾರ ಮಾಡಿದ್ದಾರೆ. ಆ ರೈತರ ಜೀವನೋತ್ಸಾಹ ನೋಡಿ ನಾನು ಇದಕ್ಕೆ ಕುಣಿದಿದ್ದೆ. ಬಿಜೆಪಿ ಅಂದರೆ ಸುಳ್ಳು ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿವರಿಸಿದ್ದಾರೆ.

Comments
Post a Comment