ಬಿಜೆಪಿಗರೇ ದಯವಿಟ್ಟು ನಮ್ಮ ಮನೆ ಒಳಗಡೆ ಬರಬೇಡಿ, ನಮ್ಮ ಮನೆಯಲ್ಲೂ 10 ವರ್ಷ ಪ್ರಾಯದ ಹೆಣ್ಣು ಮಕ್ಕಳಿದ್ದಾರೆ ! ಇಂತಹದೊಂದು ಘೋಷಣೆ ಕೇರಳದಾದ್ಯಂತ ಫೇಮಸ್!

ಬಿಜೆಪಿಗರೇ ದಯವಿಟ್ಟು ನಮ್ಮ ಮನೆ ಒಳಗಡೆ ಬರಬೇಡಿ, ಇಂತಹದೊಂದು ಘೋಷಣೆ ಕೇರಳದಾದ್ಯಂತ ಫೇಮಸ್ ! 

ಬ್ರೇಕಿಂಗ್ ನ್ಯೂಸ್ ಮಂಗಳೂರು ವರದಿ 

ಕೊಚ್ಚಿ, ಎ.14: ಕಥುವಾ ಅತ್ಯಾಚಾರ, ಕೊಲೆ ಪ್ರಕರಣ ಹಾಗು ಉನ್ನಾವೋ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಸೃಷ್ಟಿಸಿರುವ ನಡುವೆ ಕೇರಳದ ಮನೆ ಗೋಡೆಗಳಲ್ಲಿ ಅಂಟಿಸಿರುವ ಪೋಸ್ಟರ್ ಗಳು ಇದೀಗ ಭಾರೀ ಸುದ್ದಿಯಾಗಿದೆ.
ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪರ ನಡೆದ ರ್ಯಾಲಿಯಲ್ಲಿ ಬಿಜೆಪಿ ನಾಯಕರು ಮುಂಚೂಣಿಯಲ್ಲಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಕಥುವಾ ಅತ್ಯಾಚಾರಕ್ಕೆ ಸಂಬಂಧಿಸಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಆರೋಪಿ ಪರ ವಹಿಸಿದ್ದ ಇಬ್ಬರು ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದರು.

ಉನ್ನಾವೋ ಪ್ರಕರಣದಲ್ಲೂ ಕೂಡ ಬಿಜೆಪಿ ಶಾಸಕ ಆರೋಪಿಯಾಗಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ನಂತರವೇ ಆತನನ್ನು ಬಂಧಿಸಲಾಯಿತು. ಬಿಜೆಪಿ ಶಾಸಕ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನನಗೆ ನ್ಯಾಯ ಕೊಡಿಸಿ ಎಂದು ಸಂತ್ರಸ್ತೆ ಮುಖ್ಯಮಂತ್ರಿ ಆದಿತ್ಯನಾಥ್ ಗೆ ಪತ್ರ ಬರೆದಿದ್ದರು. ಆದರೆ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಅವರು ಆದಿತ್ಯನಾಥ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದಾಗಿ ಒಂದು ದಿನದ ನಂತರ ಪೊಲೀಸ್ ಕಸ್ಟಡಿಯಿಂದ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಯುವತಿಯ ತಂದೆ ಮೃತಪಟ್ಟಿದ್ದರು. ಈ ಘಟನೆಯ ನಂತರ ಆದಿತ್ಯನಾಥ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು. ನಿನ್ನೆ ಸಿಬಿಐ ಆರೋಪಿ ಬಿಜೆಪಿ ಶಾಸಕನನ್ನು ಬಂಧಿಸಿದೆ.

ಇದೀಗ ಈ ಎಲ್ಲಾ ಬೆಳವಣಿಗೆಗಳ ನಂತರ ಎರಡೂ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಪಾತ್ರ ಇರುವುದರ ಬಗ್ಗೆ ಆರೋಪಗಳ ಕೇಳಿಬಂದ ನಂತರ ಕೇರಳದ ಕೆಲ ಮನೆಗಳಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. “ಈ ಕುಟುಂಬದಲ್ಲಿ ಹೆಣ್ಣುಮಕ್ಕಳಿವೆ, ಓಟು ಕೇಳಿಕೊಂಡು ಮನೆಗೆ ಬರುವ ಬಿಜೆಪಿಗರು ಗೇಟಿನ ಹೊರಗಡೆ ನಿಲ್ಲಿ. #ಬಲತ್ಕಾರಿ ಜನತಾ ಪಾರ್ಟಿ” ಎಂದು ಪೋಸ್ಟರ್ ಗಳಲ್ಲಿ ಬರೆಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಗಳ ಫೋಟೊ ವೈರಲ್ ಆಗಿದೆ.

Comments

Popular posts from this blog

ಗಾಂಧಿ ವಿರುದ್ಧ ನಾಲಿಗೆ ಹರಿಬಿಟ್ಟ ರಾಮಸೇನೆಯ ಭಯೋತ್ಪಾದಕ!

ಪೋಲಿಸ್ ಹೋಮ್ ಗಾರ್ಡ್ ನ ಬೃಹತ್ ಕಾಮಕಾಂಡ ಬಯಲು !

ಸಂಗಬೆಟ್ಟು: ನಾಲ್ಕೂವರೆ ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಚಲಾಕಿ ಕಳ್ಳರು..!